ರಾಜ್ಯಬನಶಂಕರಿ ಘನತ್ಯಾಜ್ಯ ನಿರ್ವಹಣಾ ಘಟಕ ಅಕ್ರಮ: ಕ್ರಮಕ್ಕೆ ಗಡುವು ನೀಡಿದ ಉಪ ಲೋಕಾಯುಕ್ತರು!
ಬನಶಂಕರಿ 6ನೇ ಹಂತದಲ್ಲಿರುವ ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶನಿವಾರ ಭೇಟಿ ನೀಡಿ, ಅಕ್ರಮಗಳ ಕುರಿತು ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) 45 ದಿನಗಳ ಗಡುವು ನೀಡಿದರು.