ದೇಶ5-18 ವರ್ಷದ ಮಕ್ಕಳ ಮೇಲೆ 'ಬಯೋಲಾಜಿಕಲ್ ಇ' ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಅನುಮತಿ
ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.