ದೇಶಸಂಕಷ್ಟದಲ್ಲಿ ‘ಅನ್ನಪೂರ್ಣಿ’ ಸಿನಿಮಾ: ನಟಿ ನಯನತಾರಾ, ಚಿತ್ರದ ಇತರರ ವಿರುದ್ಧ ಪ್ರತ್ಯೇಕ ದೂರು ದಾಖಲು
ಇತ್ತೀಚೆಗಷ್ಟೇ ಬಿಡುಗಡೆಯಾದ ಅನ್ನಪೂರ್ಣಿ ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದೆ, ಚಿತ್ರದಲ್ಲಿನ ಕೆಲವು ದೃಶ್ಯಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಎರಡು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಟಿ ನಯನತಾರಾ ಮತ್ತು ಚಿತ್ರಕ್ಕೆ ಸಂಬಂಧಿಸಿದ ಇತರರ ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ.