ಬಸನ ಗೌಡ ಪಾಟೀಲ್ ಯತ್ನಾಳ್

ಸಕ್ಕರೆ ಕಾರ್ಖಾನೆಗೆ ಸಿಗದ ಅನುಮತಿ: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಯತ್ನಾಳ್ ಧರಣಿ; ಅಶೋಕ್ ಸಾಥ್
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕೋರ್ಟ್ ಆದೇಶ ನೀಡಿದರೂ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಗೆ ಕ್ರಮ ವಹಿಸದ ನಿರ್ಧಾರವನ್ನು ಬಸನಗೌಡ ಪಾಟೀಲ್ ಖಂಡಿಸಿದ್ದಾರೆ.

ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು: ಕೇಂದ್ರ ಸಚಿವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ತಳವಾರ್ ಝಳಪಿಸಿದ ಯತ್ನಾಳ್ ಬೆಂಬಲಿಗ, ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಕೇಸು ದಾಖಲಿಸಿ ಆರೋಪಿಗಳ ಬಂಧನ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಸಂತೋಷದಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಬಿಹಾರಕ್ಕೆ ನೆರವು, ಕರ್ನಾಟಕ ಮರೆವು: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ
ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಎರಡು ತಿಂಗಳುಗಳಿಂದ ಯಾವುದೇ ಪ್ರತಿಕ್ರಿಯೆ ನೀಡದೆ ಬಿಹಾರದ ನೆರೆ ಪರಿಹಾರಕ್ಕೆ ಎಲ್ಲಾ ರೀತಿಯ ಸಹಕಾರ ಘೋಷಣೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಜ್ಯದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ.

