ಬಾಂಗ್ಲಾದೇಶಿ ಪ್ರಜೆಗಳು

ಪಶ್ಚಿಮ ಬಂಗಾಳ ಪ್ರವೇಶಿಸಲು ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಸಹಾಯ: ಭಾರತೀಯ ಯೋಧನ ಬಂಧನ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸ್ವರೂಪ್‌ನಗರದ ಬಿಥಾರಿ-ಹಕೀಮ್‌ಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ದಹರ್‌ಕಂಡ್‌ನಲ್ಲಿ ಭಾರತದ ಗಡಿ ನುಸುಳಲು ಸಹಾಯ ಮಾಡಿದ ಆರೋಪ ಸಂಬಂಧ ಭಾರತೀಯ ಸೇನಾ ಯೋಧ ಹಾಗೂ ಇಬ್ಬರು ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ.

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
'ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ ಮತ್ತು ಅಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

21 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ಯಲು ಮಂಗಳೂರು ಪೊಲೀಸರು ಸಜ್ಜು; BSFಗೆ ಹಸ್ತಾಂತರ ಪ್ರಕ್ರಿಯೆ
ಉತ್ತರ ಭಾರತದ ಕಾರ್ಮಿಕರೊಂದಿಗೆ ಬಾಂಗ್ಲಾದೇಶಿ ಪ್ರಜೆಗಳನ್ನೂ ಕಾರ್ಮಿಕರೆಂಬ ನೆಪದಲ್ಲಿ ಮಂಗಳೂರಿಗೆ ಕರೆತಂದು, ಇಲ್ಲಿನ ನಿರ್ಮಾಣ ಸ್ಥಳಗಳಲ್ಲಿ ಅವರಿಗೆ ಉದ್ಯೋಗ ಕಲ್ಪಿಸುವಲ್ಲಿ ಭಾಗಿಯಾಗಿದ್ದ ಮೂವರನ್ನು ಕೂಡ ಬಂಧಿಸಲಾಗಿದೆ.

Operation Mukta: 100ಕ್ಕೂ ಹೆಚ್ಚು ಶಂಕಿತ ಅಕ್ರಮ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ; ಸೀಮಂತ್ ಕುಮಾರ್ ಸಿಂಗ್
'ನಾವು ಇಲ್ಲಿಯವರೆಗೆ ಸುಮಾರು 2,900 ಜನರ ಪರಿಶೀಲನೆ ನಡೆಸಿದ್ದೇವೆ ಮತ್ತು ಹೆಚ್ಚಿನ ಪರಿಶೀಲನೆಗಾಗಿ ಕೆಲವು ದಾಖಲೆಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಾಚರಣೆಗಳು ಮುಂದುವರಿಯಲಿವೆ' ಎಂದರು.

ಮಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಉದ್ಯೋಗ ಕಲ್ಪಿಸಿದ್ದ ಬಂಗಾಳದ ಮೂವರು ವ್ಯಕ್ತಿಗಳ ಬಂಧನ!
ಪೊಲೀಸರ ಪ್ರಕಾರ, ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಮಂಗಳೂರಿಗೆ ಕಾರ್ಮಿಕರನ್ನು ಕರೆತರುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನವದೆಹಲಿ: ಮೂವರು ಮಕ್ಕಳು ಸೇರಿದಂತೆ 9 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ!
ದೂರೆತ ಖಚಿತ ಮಾಹಿತಿ ಆಧಾರದ ಮೇಲೆ ತಂಡವು ಮೇ 25 ರಂದು ನರೇಲಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದು, ಅವರು ಮಾನ್ಯವಾದ ಯಾವುದೇ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ.

ನವದೆಹಲಿ: ಅಕ್ರಮವಾಗಿ ನೆಲೆಸಿದ್ದ ಆರು ಮಹಿಳೆಯರು ಸೇರಿದಂತೆ 10 ಬಾಂಗ್ಲಾ ಪ್ರಜೆಗಳ ಬಂಧನ
ಮಂಡವಾಲಿ ಪೊಲೀಸ್ ಠಾಣೆಯಲ್ಲಿ ದೊರೆತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಮೊದಲಿಗೆ ಬಾಂಗ್ಲಾದೇಶದ ಮಹಿಳೆಯೊಬ್ಬರನ್ನು ಬಂಧಿಸಲಾಯಿತು.

ಬೆಂಗಳೂರು: ಭಾರತಕ್ಕೆ ಅಕ್ರಮ ಪ್ರವೇಶ; ತನಿಖಾ ಸಂಸ್ಥೆ ಮುಂದೆ ನೋವು ತೋಡಿಕೊಂಡ ಬಾಂಗ್ಲಾದೇಶಿಗರು
ಕಾನೂನುಬದ್ಧ ದಾಖಲೆಗಳೊಂದಿಗೆ ಉದ್ಯೋಗ ನೀಡುವುದಾಗಿ ಸುಳ್ಳು ಭರವಸೆ ನೀಡಿ ಅವರಿಂದ ಹಣ ಪಡೆದು ಬೆಳೆಪೊಲೆ ಬಳಿಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶಿ ಪ್ರಜೆಗಳು ಎನ್‌ಐಎ ಮುಂದೆ ತಮಗಾದ ಅನುಭವವನ್ನು ವಿವರಿಸಿದ್ದಾರೆ.

ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

