ದೇಶಫೆ. 17ರಂದು ಬಿಜೆಪಿ ಜೊತೆ ಜಾರ್ಖಂಡ್ ವಿಕಾಸ್ ಮೋರ್ಚಾ ವಿಲೀನ
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ(ಜೆವಿಎಂ) ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾಗಲಿದ್ದು, ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಅವರು ನಿನ್ನೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಜಾರ್ಖಂಡ್ ಬಿಜೆಪಿ ಉಸ್ತುವಾರಿ ಓಂ ಮಾಥುರ್ ಸಹ ಇದ್ದರು.