ಬಾಬ್ರಿ ಮಸೀದಿ ಧ್ವಂಸ ಪ್ರಕರಣ

1992ರ ಗಲಭೆ ಪ್ರಕರಣ: ಹುಬ್ಳಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ, ಹಿಂದೂಪರ ಸಂಘಟನೆಗಳ ಆಕ್ರೋಶ
ಹುಬ್ಬಳ್ಳಿ-ಧಾರವಾಡ ಪೊಲೀಸರು ಡಿಸೆಂಬರ್ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಿದ್ದು, ಪೊಲೀಸರ ಕ್ರಮಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ದ್ವಂಸ ಪ್ರಹಸನ ನಾಟಕ ಪ್ರದರ್ಶನ: ವಿವಾದ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಹಸನ ಮತ್ತು ರಾಮಮಂದಿರ ನಿರ್ಮಾಣದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ವಾರ್ಷಿಕೋತ್ಸವದಲ್ಲಿ ನೀಡಿರುವ ನೃತ್ಯ ಸಂಗೀತ ಆಧಾರಿತ ನಾಟಕ ಪ್ರದರ್ಶನ ವಿವಾದ ಹುಟ್ಟುಹಾಕಿದೆ.

ರಾಮ ಮಂದಿರ ವಿವಾದ: ಲಿಖಿತ ಉತ್ತರ ನೀಡುವಂತೆ ಬಣಗಳಿಗೆ "ಸುಪ್ರೀಂ" ಸೂಚನೆ!
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ವಿವಾದ ಸಂಬಂಧ ಸಂಧಾನ ಪ್ರಕ್ರಿಯೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್ ಬಣಗಳಿಗೆ ತನ್ನ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಉತ್ತರಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳ ಖುಲಾಸೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಐಎಂಪಿಎಲ್‌ಬಿ
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

2019ರ 'ಸುಪ್ರೀಂ' ಅಯೋಧ್ಯೆ ತೀರ್ಪಿನ ನಂತರ ಬಾಬ್ರಿ ಪ್ರಕರಣವು ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿತು: ಶಿವಸೇನೆ
ಅಯೋಧ್ಯೆ ರಾಮಜನ್ಮಭೂಮಿ ಕುರಿತಾಗಿ 2019ರಲ್ಲಿ ಸುಪ್ರೀಂ ಕೋರ್ಟ್ ನ ಐತಿಹಾಸಿಕ ತೀರ್ಪಿನ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣವು ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿತ್ತು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ರಾಮಜನ್ಮಭೂಮಿ ಹೋರಾಟದ ಬಗ್ಗೆ ಇದ್ದ ನನ್ನ ಮತ್ತು ಬಿಜೆಪಿಯ ನಂಬಿಕೆ, ಬದ್ಧತೆಗೆ ಸಿಕ್ಕಿದ ಜಯ: ಎಲ್.ಕೆ. ಅಡ್ವಾಣಿ
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಿಜೆಪಿಯ ರಾಜಕೀಯ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿಯವರ ಪಾಲಿಗೆ ಅತ್ಯಂತ ಪ್ರಮುಖವಾಗಿತ್ತು. ಈ ಇಳಿವಯಸ್ಸಿನಲ್ಲಿ ಇಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಅವರ ಪಾಲಿಗೆ ಐತಿಹಾಸಿಕ ಜಯವಾಗಿದೆ.

ಬಾಬ್ರಿ ಮಸೀದಿ ಕೇಸಿನ ತೀರ್ಪನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇವೆ: ಆರೋಪಿಗಳ ಪ್ರತಿಕ್ರಿಯೆ
ಸುದೀರ್ಘ 28 ವರ್ಷಗಳ ಕಾನೂನು ಹೋರಾಟದ ಬಳಿಕ ಬುಧವಾರ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡುತ್ತಿದ್ದು ದೇವಾಲಯ ನಗರಿ ಅಯೋಧ್ಯೆ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೋರ್ಟ್ ತೀರ್ಪು ಏನೆಂದು ಹೊರಬರುತ್ತದೆ ಎಂದು ಇಡೀ ದೇಶ ಕಾತರದಿಂದ ಕಾಯುತ್ತಿದೆ.

ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ ಬಾಬ್ರಿ ಮಸೀದಿ ಧ್ವಂಸ ತೀರ್ಪು: ವಿಡಿಯೊ ಕಾನ್ಫರೆನ್ಸ್ ಮೂಲಕ ಅಡ್ವಾಣಿ, ಜೋಷಿ ಹಾಜರು
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಇನ್ನು ಕೆಲವೇ ಹೊತ್ತಿನಲ್ಲಿ ಹೊರಬರಲಿದ್ದು, ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಇಂದು ನ್ಯಾಯಾಲಯ ಮುಂದೆ ಹಾಜರಾಗುವುದಿಲ್ಲ ಎಂದು ತಿಳಿದುಬಂದಿದೆ.

ಇಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು: ಅಡ್ವಾಣಿ, ಜೋಷಿ, ಉಮಾ ಭಾರತಿ ಭವಿಷ್ಯ ನಿರ್ಧಾರ
1992ರಲ್ಲಿ ಬಾಬ್ರಿ ಮಸೀದಿಯನ್ನು ಕೆಡವಲು ಅಂದಿನ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮೊದಲಾದವರು ಪಿತೂರಿ ನಡೆಸಿದ್ದರೆ? ಈ ಬಗ್ಗೆ ಲಕ್ನೊದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಲಿದ್ದು ಇದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಪಾಲಿಗೂ ಮಹತ್ವದ್ದಾಗಿದೆ.

