ರಾಜಕೀಯಕಾರ್ಮಿಕರು ತಾವು ಮಾಡದ ತಪ್ಪಿಗೆ ಅನ್ನಾಹಾರವಿಲ್ಲದೆ ಸಾಯುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: ಎಚ್ಡಿ ಕುಮಾರಸ್ವಾಮಿ
ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷೀಕರಿಸುವಂತಿದೆ.