ರಾಜ್ಯಯಾದಗಿರಿ: ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕನ ಹತ್ಯೆಗೆ ಯತ್ನ, ಮಾರಾಕಾಸ್ತ್ರಗಳಿಂದ ಹಲ್ಲೆ
ಯಾದಗಿರಿ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಗ್ಗೆ ನಗರದ ಚಿತ್ತಾಪುರ ರಸ್ತೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ.