ರಾಜಕೀಯಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ?: ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಭಾಗದ ಶಾಸಕ ಅರವಿಂದ್ ಬೆಲ್ಲದ್ ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ದಟ್ಟವಾಗಿ ಕೇಳಿಬರುತ್ತಿದೆ. ತಾಂತ್ರಿಕ ಕಾರಣಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಕೂಡ ಈ ಬಗ್ಗೆ ಹಲವು ಊಹಾಪೋಹಗಳು ಕೇಳಿಬರುತ್ತಿದೆ.