ರಾಜ್ಯಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಜಾಮೀನು ಕೋರಿ 'ಹೈ' ಮೆಟ್ಟಿಲೇರಿದ ಅಭಿನವ ಹಾಲಶ್ರೀ ಸ್ವಾಮೀಜಿ
ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಜಿ ಎಂ ಅಭಿನವ ಶ್ರೀ ಹಾಲವೀರಜ್ಜ ಅಲಿಯಾಸ್ ಅಭಿನವ ಹಾಲಶ್ರೀ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.