ಬಿಜೆಪಿ ಮುಖಂಡ

ಶ್ರೀನಗರ: ಮಾಜಿ ಶಾಸಕ, ಬಿಜೆಪಿ ಮುಖಂಡ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ
2024 ರ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುರೆಜ್‌ನಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಖಾನ್, ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ಮುಖಂಡನ ಮಗನಿಗೆ ಸೇರಿದ ಐಷಾರಾಮಿ ಕಾರು ಅಪಘಾತ: ಚಾಲಕನ ಬಂಧನ
ಸೋಮವಾರ ಮುಂಜಾನೆ ಇಲ್ಲಿನ ರಾಮದಾಸ್ಪೇಟ್ ಪ್ರದೇಶದಲ್ಲಿ ಬವಾಂಕುಲೆ ಅವರ ಪುತ್ರ ಸಂಕೇತ್ ಒಡೆತನದ ಆಡಿ ಕಾರು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಲೈಂಗಿಕ ಕಿರುಕುಳ: ಚನ್ನಪಟ್ಟಣ ಗ್ರಾಮಾಂತರ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು
ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ಮನೆ ಮುಂದೆ ನಿಂತಿದ್ದರು.

ಶಿವಮೊಗ್ಗ: ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಆರೋಪ; ಬಿಜೆಪಿ ಮುಖಂಡ ಬಂಧನ
43 ವರ್ಷದ ವಿಚ್ಛೇದಿತ ಮಹಿಳೆಗೆ 2023 ರ ಆಗಸ್ಟ್ 31ರಿಂದ ಶರತ್ ಪರಿಚಯವಿತ್ತು ಎನ್ನಲಾಗಿದೆ. ತನಗೆ ಮದುವೆಯಾಗಿರುವುದನ್ನು ಮಹಿಳೆಯಿಂದ ಮುಚ್ಚಿಟ್ಟಿದ್ದ ಶರತ್, ತಾನಿನ್ನೂ ಅವಿವಾಹಿತನಾಗಿದ್ದು ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ...

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಸೂಚಿಸಲಾಗಿದೆ ಎಂದ ಗೃಹ ಸಚಿವ ಪರಮೇಶ್ವರ್
ಬಿಜೆಪಿ ಮುಖಂಡ ಪೃಥ್ವಿಸಿಂಗ್ ಅವರ ಮೇಲೆ ಹಲ್ಲೆ ನಡೆದ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ
ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಮುಖಂಡನಿಗೆ ಚೂರಿ ಇರಿತ: ಆರೋಪಿಗಳ ಕೂಡಲೇ ಬಂಧಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹ
ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ (ಚನ್ನರಾಜ್ ಹಟ್ಟಿಹೊಳಿ)ನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಕಾರು ಅಪಘಾತ: ಪ್ರವಾಸಕ್ಕೆ ತೆರಳಿದ್ದ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವು
ತಮಿಳುನಾಡಿನ ಊಟಿಯಲ್ಲಿ ಗುರುವಾರ ನಡೆದ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿದ್ದಾರೆ.

