ದೇಶಮತದಾನೋತ್ತರ ಸಮೀಕ್ಷೆ: ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ
ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಮುಗಿದಿದ್ದು, ಸೋಮವಾರ ಸಂಜೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಮೂರು ರಾಜ್ಯಗಳ ಮತ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ.