ದೇಶತಮಿಳುನಾಡು: ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ, ಮರು ಮತದಾನಕ್ಕೆ ಕೆ ಅಣ್ಣಾಮಲೈ ಒತ್ತಾಯ
ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.