ರಾಜಕೀಯರಾಜ್ಯೋತ್ಸವ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನದಿಂದ ಸಿ.ಟಿ.ರವಿ ಮುಕ್ತ?
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನ ಜವಾಬ್ದಾರಿಯಿಂದ ಸಿ ಟಿ ರವಿಯವರನ್ನು ಮುಕ್ತಗೊಳಿಸುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ 2ರಂದು ಸಿ ಟಿ ರವಿಯವರು ಸಲ್ಲಿಸಿದ್ದ ರಾಜೀನಾಮೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮುಂದಿದೆ.