ರಾಜ್ಯಬಿಡಿಎ ಅಕ್ರಮ ಸೈಟ್ಗಳಿಗೆ ಸಕ್ರಮ ಭಾಗ್ಯ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಬಿಡಿಎ ಕಾಯ್ದೆ ತಿದ್ದುಪಡಿಗಾಗಿ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಮನೆ ನಿರ್ಮಿಸಿ 12 ವರ್ಷ ಆಗಿದ್ದರೆ ಮಾತ್ರ ಸಕ್ರಮಕ್ಕೆ ಅವಕಾಶ ನೀಡಲಾಗುತ್ತದೆ.