ಬಿಬಿಎಂಪಿ ಚುನಾವಣೆ

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಚುನಾವಣೆ; ನೇರ ಹಣಾಹಣಿಗೆ ಬಿಜೆಪಿ-ಜೆಡಿಎಸ್ ಒಂದಾಗಲಿ: ಡಿ.ಕೆ ಶಿವಕುಮಾರ್
ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ.

ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಆಯೋಗಕ್ಕೆ ಪತ್ರ; ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ: ಡಿಕೆಶಿ
15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ.

ಬೆಂಗಳೂರು ನಗರದಲ್ಲಿದ್ದೇವೆ ಎಂಬ ಹಿರಿಮೆ ನಿಮಗೂ ಇರಬೇಕು; ಪಕ್ಷಬೇಧ ಮರೆತು ನನಗೆ ಆಶೀರ್ವದಿಸಿ: ಡಿ.ಕೆ ಶಿವಕುಮಾರ್
ನಾನು ಈ ಕ್ಷೇತ್ರವನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಪಕ್ಕದಲ್ಲೇ ಎಲೆಕ್ಟ್ರಾನಿಕ್ ಸಿಟಿ ಇದೆ. ಈ ಭಾಗದಲ್ಲಿ ಸರಿಯಾಗಿ ತೆರಿಗೆ ಪಾವತಿಯಾಗುತ್ತಿಲ್ಲ ಎಂದು ಇಲ್ಲಿನ ಶಾಸಕರಾದ ಕೃಷ್ಣಪ್ಪ ಅವರೂ ಸೇರಿದಂತೆ ಅನೇಕರು ದೂರು ನೀಡಿದ್ದಾರೆ.

BBMP ಚುನಾವಣೆ ಮುಂದಿನ ವರ್ಷ?
198 ವಾರ್ಡ್‌ಗಳನ್ನು ಹೊಂದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015 ರಲ್ಲಿ ನಡೆದಿತ್ತು. ಇದರ ಅವಧಿ ಸೆಪ್ಟೆಂಬರ್ 2020 ರಲ್ಲಿ ಕೊನೆಗೊಂಡಿತ್ತು. ಅಂದಿನಿಂದ ಚುನಾವಣೆಗಳನ್ನು ಪದೇ ಪದೇ ಮುಂದೂಡಲಾಗಿದೆ.

GBA: ಡಿಸೆಂಬರ್ 1ರ ಒಳಗೆ ಪಾಲಿಕೆ ಚುನಾವಣೆಗೆ ಸಿದ್ಥತೆ ಪೂರ್ಣ; ಮೂರ್ನಾಲ್ಕು ದಿನಗಳಲ್ಲಿ ಅಫಿಡವಿಟ್ ಸಲ್ಲಿಕೆ
ನಿನ್ನೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಸಭೆ ಮಾಡಿದ್ದು, ಬೆಂಗಳೂರು ಪಾಲಿಕೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

'ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ'ಕ್ಕೆ ರಾಜ್ಯಪಾಲರ ಒಪ್ಪಿಗೆ: ಬಿಬಿಎಂಪಿ ಚುನಾವಣೆ ಮತ್ತಷ್ಟು ವಿಳಂಬ?
ಕಳೆದ 4.5 ವರ್ಷಗಳಿಂದ ರಾಜ್ಯ ರಾಜಧಾನಿಗೆ ಕೌನ್ಸಿಲ್ ಸಂಸ್ಥೆ ಇಲ್ಲ, ಜೊತೆಗೆ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿರುವುದರಿಂದ ಚುನಾವಣೆ ಮತ್ತಷ್ಟು ವಿಳಂಬವಾಗುವ ನಿರೀಕ್ಷೆಯಿದೆ.

BBMP ಚುನಾವಣೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ BJP
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲ ಸಂದೀಪ್ ಪಾಟೀಲ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.

ಇಷ್ಟವಿರಲಿ ಬಿಡಲಿ, ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲೇಬೇಕು: ಸಚಿವ ರಾಮಲಿಂಗಾ ರೆಡ್ಡಿ
ಸೆಪ್ಟೆಂಬರ್ 2020 ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ 2001 ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು ನಡೆದಿತ್ತು.

ಮೇ-ಜೂನ್‌ನಲ್ಲಿ BBMP ಚುನಾವಣೆ?
ಮೂಲಗಳ ಪ್ರಕಾರ, ಶಾಲಾ ಕಾಲೇಜುಗಳ ಪರೀಕ್ಷೆಗಳ ನಂತರ ಏಪ್ರಿಲ್‌ನಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿದುಬಂದಿದೆ.

