ಬಿಲ್ಕಿಸ್ ಬಾನು

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗೆ 10 ದಿನಗಳ ಪೆರೋಲ್ ನೀಡಿದ ಗುಜರಾತ್ ಹೈಕೋರ್ಟ್
ಮಾರ್ಚ್ 5 ರಂದು ನಡೆಯಲಿರುವ ತನ್ನ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ ಶುಕ್ರವಾರ 10 ದಿನಗಳ ಪೆರೋಲ್ ನೀಡಿದೆ.

ಬಿಲ್ಕಿಸ್ ಬಾನೋ ಪ್ರಕರಣ: ಶರಣಾಗಲು ಹೆಚ್ಚುವರಿ ಸಮಯಾವಕಾಶ ಇಲ್ಲ; ಅಪರಾಧಿಗಳಿಗೆ 'ಸುಪ್ರೀಂ' ಶಾಕ್!
ಶರಣಾಗತಿಗೆ ಕಾಲಾವಕಾಶ ಕೋರಿ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಭಾನುವಾರದ ಒಳಗೆ ಶರಣಾಗುವಂತೆ ಸೂಚನೆ ನೀಡಿದೆ.

ಬಿಲ್ಕಿಸ್ ಬಾನು ಆಧರಿಸಿದ ಸಿನಿಮಾಗಾಗಿ ನನ್ನ ಬಳಿ ಸ್ಕ್ರಿಪ್ಟ್ ಸಿದ್ಧವಿದೆ, ಆದರೆ...: ಕಂಗನಾ ರನೌತ್
ಬಿಲ್ಕಿಸ್ ಬಾನು ಪ್ರಕರಣವನ್ನು ಆಧರಿಸಿದ ಚಿತ್ರಕ್ಕಾಗಿ ನನ್ನ ಬಳಿ ಸ್ಕ್ರಿಪ್ಟ್ ಸಿದ್ಧವಾಗಿದೆ. ಆದರೆ, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಿಂದ ಬೆಂಬಲದ ಕೊರತೆಯಿಂದಾಗಿ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣ: 'ಸುಪ್ರೀಂ' ತೀರ್ಪನ್ನು ಸ್ವಾಗತಿಸಿದ ಪ್ರಮುಖ ಸಾಕ್ಷಿದಾರ, ಪಟಾಕಿ ಸಿಡಿಸಿ ಸಂಬಂಧಿಕರ ಸಂಭ್ರಮಾಚರಣೆ
ಬಿಲ್ಕಿಸ್ ಬಾನು ಪ್ರಕರಣದ ಸಾಕ್ಷಿಯೊಬ್ಬರು ಸೋಮವಾರ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡಿ ಅವಧಿಪೂರ್ವ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಶ್ಲಾಘಿಸಿದ್ದು, ಬಾನು ಅವರಿಗೆ 'ಇಂದು ನ್ಯಾಯ ಸಿಕ್ಕಿದೆ' ಎಂದಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣ: ಕೇಂದ್ರ, ಗುಜರಾತ್ ಸರ್ಕಾರ ಕ್ಷಮೆ ಕೇಳಬೇಕು ಎಂದ ಓವೈಸಿ; ರಾಹುಲ್ ಹೇಳಿದ್ದೇನು?
ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಗುಜರಾತ್ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಬಾನು ಅವರ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ 'ಸುಪ್ರೀಂ'
2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆಗೆ ಅನುಮತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆ ಕುರಿತು ದಾಖಲೆ ಸಲ್ಲಿಸುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ
2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11 ಅಪರಾಧಿಗಳಿಗೆ ಕಳೆದ ವರ್ಷ ನೀಡಲಾದ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.

ಗುಜರಾತ್: ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿಯೊಂದಿಗೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು!
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಮಾರ್ಚ್ 27 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಚಿಮನ್‌ಲಾಲ್ ಭಟ್ ಅವರು ಎರಡು ದಿನಗಳ ಹಿಂದೆ ಶನಿವಾರ ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಪರಾಧಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನು ಅರ್ಜಿ; ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮನವಿ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಗುಜರಾತ್ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

