ಬಿಸಿಲು

ಸೆಪ್ಟೆಂಬರ್‌ನಲ್ಲೇ ಸುಡುತ್ತಿದೆ ಬೆಂಗಳೂರು: ದಶಕದ ದಾಖಲೆ ಮುರಿದ ಬಿಸಿಲು; 32.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು..!
ಇನ್ನೊಂದೆಡೆ, ನಗರದ ಹೊರವಲಯದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ಕೇಂದ್ರದಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಾಗಿದ್ದು, ಬರೋಬ್ಬರಿ 33.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕೂಲ್.. ಕೂಲ್.. ಬೆಂಗಳೂರಿಗೆ ಏನಾಯ್ತು..? ಸೆಪ್ಟೆಂಬರ್‌ನಲ್ಲೇ ಏಪ್ರಿಲ್ ತಿಂಗಳ ಬಿಸಿಲು; 32 ಡಿಗ್ರಿ ದಾಟಿದ ತಾಪಮಾನ, ಸಿಲಿಕಾನ್ ಸಿಟಿ ಜನತೆ ಹೈರಾಣ..!
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ ನಗರದ ಸಾಮಾನ್ಯ ಗರಿಷ್ಠ ತಾಪಮಾನ ಸುಮಾರು 28 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.

ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ: IMD ಮುನ್ಸೂಚನೆ; 1901ರ ನಂತರ ಈ ಬಾರಿ ಆಗಸ್ಟ್ ತಿಂಗಳಲ್ಲಿ ಬಿಸಿಲು ಅತಿಹೆಚ್ಚು!
ಆಗಸ್ಟ್ ತಿಂಗಳು 1901ರ ಬಳಿಕ ದೇಶ ಕಂಡ ಅತ್ಯಂತ ಬಿಸಿಯಾದ ಆಗಸ್ಟ್ ತಿಂಗಳು ಆಗಿದ್ದು, ಸರಾಸರಿ ತಾಪಮಾನ 28.01 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

ಹೊಟ್ಟೆ ಉಬ್ಬರ, ಗ್ಯಾಸ್, ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತಿದೆಯೇ?; ಬಿರುಬಿಸಿಲಿನ ವೇಳೆ ಈ ಆಹಾರಗಳ ತಪ್ಪಿಸುವುದೇ ಉತ್ತಮ..!
ಅತಿಯಾದ ಬಿಸಿಲಿನಿಂದ ಹೊಟ್ಟೆಯಲ್ಲಿರುವ ಜೀರ್ಣಕಾರಿ ಕಿಣ್ವಗಳ ಕಾರ್ಯಕ್ಷಮತೆ ಕಡಿಮೆಯಾಗಬಹುದು. ವಿಶೇಷವಾಗಿ ಪ್ರೋಟೀನ್ ಹಾಗೂ ಹೆಚ್ಚು ಫ್ಯಾಟ್ (ಕೊಬ್ಬು) ಆಹಾರವನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತದೆ.

ಬೆಂಗಳೂರಲ್ಲಿ ರಣ ಬಿಸಿಲು: ಡಿಹೈಡ್ರೇಷನ್-ಹೀಟ್ ಸ್ಟ್ರೋಕ್ ಭೀತಿ; ಮಕ್ಕಳು-ವೃದ್ಧರು ಹೆಚ್ಚು ಅಪಾಯದಲ್ಲಿ..!
ಈ ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿದ್ದು, ವಿಶೇಷವಾಗಿ ಡಿಹೈಡ್ರೇಷನ್, ಹೀಟ್ ಎಕ್ಸಾಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.

ಬಿರುಬಿಸಿಲಿಗೆ ಕಲಬುರಗಿ ಕಂಗಾಲು: 45 ಡಿಗ್ರಿ ತಲುಪಿದ ತಾಪಮಾನ; ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವೆಡೆ 42 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 24 ಸ್ಥಳಗಳಲ್ಲಿ 42 ಡಿಗ್ರಿಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದರೆ, ರಾಯಚೂರಿನಲ್ಲಿ 22, ಬೀದರ್‌ನಲ್ಲಿ 18, ವಿಜಯಪುರದಲ್ಲಿ 14, ಯಾದಗಿರಿಯಲ್ಲಿ 11 ಮತ್ತು ಬಾಗಲಕೋಟೆಯಲ್ಲಿ 7 ಸ್ಥಳಗಳಲ್ಲಿ ಉಷ್ಣಾಂಶ 42 ಡಿಗ್ರಿ ಮೀರಿದೆ.

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ; ಮಳೆ ಮುನ್ಸೂಚನೆ ಇಲ್ಲ ಎಂದ IMD
ಬೆಂಗಳೂರಿನಲ್ಲಿ ಬೆಳಗಿನ ವೇಳೆಯಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದರೂ, ಮಳೆಯಾಗಿ ಪರಿವರ್ತನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ.

ರಣ ಬಿಸಿಲಿಗೆ ಸಿಲಿಕಾನ್ ಸಿಟಿ ಜನ ತತ್ತರ: 35 ಡಿಗ್ರಿ ತಲುಪಿದ ತಾಪಮಾನ; ಮಧ್ಯಾಹ್ನ 12 ರಿಂದ 3ರವರೆಗೆ ಹೊರ ಹೋಗುವುದನ್ನು ತಪ್ಪಿಸಿ..!
ಭಾರತೀಯ ಹವಾಮಾನ ಇಲಾಖೆ ನೀಡಿದ ಸೂಚನೆಯ ಮೇರೆಗೆ ಈ ಎಚ್ಚರಿಕೆ ಹೊರಡಿಸಲಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಕನಿಷ್ಠ ತಾಪಮಾನವೂ 20 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಾಗಿದೆ.

ನಗರದಲ್ಲಿ ರಣಬಿಸಿಲು: ದಾಹದಿಂದ ಬಳಲುತ್ತಿರುವ ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದು; Operation Quench Thirst ಆರಂಭ
ಸ್ವಯಂಸೇವಾ ಸಂಸ್ಥೆ People for Animals ಮತ್ತು ಕರ್ನಾಟಕ ಅರಣ್ಯ ಇಲಾಖೆ ಕೈಜೋಡಿಸಿ ತುರುಹಳ್ಳಿ ಅರಣ್ಯ ಪ್ರದೇಶದಲ್ಲಿ ಈ ಅಭಿಯಾನವನ್ನು ಜಾರಿಗೆ ತಂದಿವೆ. ಈ ಯೋಜನೆಯ ಉದ್ದೇಶ ವನ್ಯಜೀವಿಗಳಿಗೆ ನೀರಿನ ಲಭ್ಯತೆ ಹೆಚ್ಚಿಸುವುದಾಗಿದೆ.

