ರಾಜ್ಯಲಾಕ್ ಡೌನ್ ಎಫೆಕ್ಟ್: ಸಂಕಷ್ಟದಲ್ಲಿ ಉಡುಪಿ, ದಕ್ಷಿಣ ಕನ್ನಡದ 2 ಲಕ್ಷ ಕುಟುಂಬಗಳು!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸುಮಾರು 2 ಲಕ್ಷ ಬೀಡಿ ಕಾರ್ಮಿಕರು ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನಿರ್ವಹಣೆ ಜವಾಬ್ದಾರಿ ಹೊತ್ತ ಹೆಚ್ಚಿನ ಮಹಿಳೆಯರು ಬೀಡಿ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದು, ಪ್ರಸ್ತುತ ಅವರ ಸಂಸಾರದ ನಿರ್ವಹಣೆ ಕಠಿಣವಾಗಿದೆ.