ರಾಜ್ಯಉಡುಪಿ: ತಾಯಿಯ ಶವದ ಬಳಿ 3 ದಿನ ಕಳೆದ ಬುದ್ಧಿಮಾಂದ್ಯ ಮಹಿಳೆ ಸಾವು!
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿ ಗ್ರಾಮದಲ್ಲಿ 3 ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಶವದ ಜೊತೆ ಊಟ, ನೀರಿಲ್ಲದೆ ಒಬ್ಬಂಟಿಯಾಗಿ ದಿನ ಕಳೆದ ಬುದ್ಧಿಮಾಂದ್ಯ ಯುವತಿಯೊಬ್ಬಳು ಸ್ಥಳೀಯರ ಸಮಯಪ್ರಜ್ಞೆಯಿಂದ ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾಳೆ.