ರಾಜ್ಯನೈತಿಕ ಪೊಲೀಸ್ಗಿರಿಯನ್ನು ಧೈರ್ಯದಿಂದ ಎದುರಿಸಿದ ಬುರ್ಖಾಧಾರಿ ಯುವತಿ ನಡೆಗೆ ಮೆಚ್ಚುಗೆ; ಆರೋಪಿ ಬಂಧನ
ಬೆಂಗಳೂರಿನಲ್ಲಿ ನೈತಿಕ ಪೊಲೀಸ್ಗಿರಿಯನ್ನು ಧೈರ್ಯವಾಗಿ ಎದುರಿಸಿ ಆರೋಪಿಗೆ ಸವಾಲೆಸೆದ ಬುರ್ಖಾಧಾರಿ ಯುವತಿಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬುರ್ಖಾ ತೊಟ್ಟಿದ್ದ ಯುವತಿ ಹಿಂದೂ ಯುವಕನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಯುವಕನೊಬ್ಬ ಅಡ್ಡಿಪಡಿಸಿದ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ.