ಕರ್ನಾಟಕಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಹಲವು ಪ್ರದೇಶಗಳು ಜಲಾವೃತ, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಲ್ಲಿ SDRF ಕಾರ್ಯಾಚರಣೆ
ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್ಮೆಂಟ್ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು. ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್ಮೆಂಟ್ನ 8 ಬ್ಲಾಕ್ಗಳಿಗೆ ನೀರು ನುಗ್ಗಿದೆ.