ರಾಜ್ಯವೆಬ್ ಸೈಟ್ ಮೂಲಕ ಸರಕಾರಿ-ಖಾಸಗಿ ಆಸ್ಪತ್ರೆಗಳ ಬೆಡ್ ಮಾಹಿತಿ ಒದಗಿಸಲು ಕಾರಜೋಳ ಸೂಚನೆ
ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್ಸೈಟ್ ಮೂಲಕ ಜನರಿಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಮಂತ್ರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.