ರಾಜ್ಯರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಸವಾರ ಬಲಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸರಿಂದ ನೋಟಿಸ್
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾಗಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ನೋಟಿಸ್ ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.