ಬೊಮ್ಮಾಯಿ ಸರ್ಕಾರ

5,64,896 ಕೋಟಿ ರೂ. ಸಾಲ; ಬಿಜೆಪಿ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ: ಸಿದ್ದರಾಮಯ್ಯ
ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಕಳೆದ ಐದು ವರ್ಷಗಳಲ್ಲಿ 2,54,760 ಕೋಟಿ ರೂಪಾಯಿ ಸಾಲ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳು 3 ಕೋಟಿ ಲಂಚ ಕೇಳಿದ್ದರು ಎಂದ ಆರ್ ಡಿ ಪಾಟೀಲ್!
ಪಿಎಸ್ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು.

ಸಚಿವ ಸಂಪುಟ ನೀಡಿದ 2ಡಿ ಮೀಸಲಾತಿ ತಿರಸ್ಕರಿಸಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ಪಂಚಮಸಾಲಿ ಸಮುದಾಯಕ್ಕೆ ನೀಡಿದ 2ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಪೋಸ್ಟಿಂಗ್ ಪಡೆಯಲು 80 ಲಕ್ಷ ರೂ.; ಸಚಿವ ಎಂಟಿಬಿ ನಾಗರಾಜ್ ರಿಂದ 40 ಪರ್ಸೆಂಟ್ ಸರ್ಕಾರದ ಭ್ರಷ್ಟಾಚಾರ ಬಯಲು
ಅಮಾನತುಗೊಂಡಿದ್ದ ಕೆ.ಆರ್. ಪುರಂ ಪೊಲೀಸ್ ಠಾಣೆಯ ಇನ್ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...

ಪತ್ರಕರ್ತರಿಗೆ ಸಿಎಂ ಕಚೇರಿಯಿಂದ 2.5 ಲಕ್ಷ ರೂ. ನಗದು: ಇದು 40% ಕಮಿಷನ್ ಮುಚ್ಚಿಡಲು ನೀಡಿದ ಲಂಚವೇ?-ಕಾಂಗ್ರೆಸ್ ಪ್ರಶ್ನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಪಾಯಿ ನಗದು ನೀಡಿರುವ ಆರೋಪ ಕೇಳಿಬಂದಿದ್ದು,..

ಸರ್ಕಾರಿ ಶಾಲೆ ಮಕ್ಕಳಿಂದ ತಿಂಗಳಿಗೆ 100 ರೂ. ಸಂಗ್ರಹ: ಆದೇಶ ಹಿಂಪಡೆಯುವಂತೆ ಸಿದ್ದರಾಮಯ್ಯ ಆಗ್ರಹ
ಶಿಕ್ಷಣ ಇಲಾಖೆ ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಎಸ್‌ಡಿಎಂಸಿಗಳ ಮೂಲಕ ಮಾಸಿಕ ತಲಾ 100 ರೂಪಾಯಿ ಸಂಗ್ರಹಕ್ಕೆ ಅವಕಾಶ ನೀಡಿ ಸುತ್ತೋಲೆ ಹೊರಡಿಸಿದ್ದು,...

'ಬೊಮ್ಮಾಯಿ ಸರ್ಕಾರ ಭ್ರಷ್ಟ ಮತ್ತು ನಿರ್ಜೀವ': ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ನಿರ್ಜೀವ ಎಂದು ವ್ಯಾಖ್ಯಾನಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇಕಡಾ 90ರಷ್ಟನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಸರ್ಕಾರದಲ್ಲಿ 40% ಕಮಿಷನ್ ದಂಧೆ, ಬಿಬಿಎಂಪಿಯಲ್ಲಿ ಶೇ.50ರಷ್ಟು ಕಮಿಷನ್: ಗುತ್ತಿಗೆದಾರ ಸಂಘದ ಅಧ್ಯಕ್ಷ ಆರೋಪ
ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶೇಕಡಾ 40ರಷ್ಟು ಕಮಿಷನ್ ಬೇಡಿಕೆ ದಂಧೆ ನಡೆಯುತ್ತಿದ್ದರೆ ಅದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 50 ಪರ್ಸೆಂಟ್ ವರೆಗೆ ಇದೆ ಎಂಬ ಆರೋಪ ಕೇಳಿಬರುತ್ತಿದೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ ಐಎಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ
ಕಳೆದ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

