ರಾಜ್ಯವಿವಿ, ಪದವಿ ಕಾಲೇಜುಗಳ ಬೋಧಕ- ಬೋಧಕೇತರ ಹುದ್ದೆಗಳ ನೇಮಕಾತಿ: ಕೆಇಎ ಮೂಲಕ ಪರೀಕ್ಷೆ- ಡಾ. ಅಶ್ವತ್ಥ ನಾರಾಯಣ
ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.