ಬ್ರಾಹ್ಮಣ ಸಮುದಾಯ

ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ನಟಿ ಗೆಹನಾ ವಸಿಷ್ಠ ದೂರು
ನಂತರ ಅನುರಾಗ್ ಕಶ್ಯಪ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು. ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದು, ಆ ಸಂದರ್ಭದಲ್ಲಿ ಹೇಳಿದ ಒಂದು ನಿರ್ದಿಷ್ಟ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.

ಜಾತಿ ನಿಂದನೆ: ಸಚಿವ ಡಿ.ಸುಧಾಕರ್ ವಜಾಕ್ಕೆ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಆಗ್ರಹ; ಸಿಎಂ ಗೆ ಪತ್ರ
ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ಮೇಲೆ ಎಫ್ಐಆರ್ ದಾಖಲಾಗಿದ್ದು ಈ ನಡುವೆ ಡಿ.ಸುಧಾಕರ್ ಬ್ರಾಹ್ಮಣರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿರುವ ವೀಡಿಯೋ ವೈರಲ್ ಆಗತೊಡಗಿದೆ.

ಕನ್ನಡ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ: ಪಾಠ ಕೈಬಿಡಲು ಆಗ್ರಹಿಸಿ ವಿಪ್ರ ಒಕ್ಕೂಟದಿಂದ ಪ್ರತಿಭಟನೆ
8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಛತ್ತೀಸ್ ಗಢ ಮುಖ್ಯಮಂತ್ರಿ ತಂದೆಯ ಬಂಧನ!
ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅವರು ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಏಕಾಏಕಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಾಹ್ಮಣರ ಮತ ಸೆಳೆಯುವ ಬಿಜೆಪಿ ಯತ್ನಕ್ಕೆ ವಿಪಕ್ಷಗಳಿಂದ ತೀವ್ರ ಟೀಕೆ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿ ರಾಜ್ಯದಲ್ಲಿನ ಬ್ರಾಹ್ಮಣ ಸಮುದಾಯದ ಮತಗಳನ್ನು ಸೆಳೆಯುವುದಕ್ಕೆ ಮುಂದಾಗಿದ್ದು ಇದಕ್ಕಾಗಿ ಪ್ರತ್ಯೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು: ಮಂಡಳಿ ಅಧ್ಯಕ್ಷರಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು
ನಟ ಚೇತನ್ ನೀಡಿರುವ ಹೇಳಿಕೆ ಈಗ ಭಾರೀ ವಿವಾದ ಸೃಷ್ಟಿಸಿದೆ. ಬ್ರಾಹ್ಮಣ ಸಮುದಾಯ ವಿರುದ್ಧ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದೇನೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಲು ಸುರೇಶ್ ಕುಮಾರ್ ಸೂಚನೆ
ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಶಿಕ್ಷಣ, ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ: ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ ಮತ್ತು ಜಾಲತಾಣವನ್ನು ಉದ್ಘಾಟನೆ ಮಾಡಿದರು.

ತಂದೆಯಂತೆಯೇ ನಾನೂ ಬ್ರಾಹ್ಮಣ ವ್ಯಕ್ತಿಯನ್ನು ಸೋಲಿಸಿದ್ದೇನೆ: ನೂತನ ಶಾಸಕ ಆನಂದ್ ನ್ಯಾಮಗೌಡ
ನನ್ನ ತಂದೆಯಂತೆಯೇ ನಾನು ಸಹ ಬ್ರಾಹ್ಮಣ ವ್ಯಕ್ತಿಯನ್ನು ಸೋಲಿಸಿ ಮೊದಲ ಬಾರಿಗೆ ಶಾಸಕನಾಗಿದ್ದೇನೆ...

