ದೇಶಅತ್ಯಾಚಾರವೆಸಗಿದರೆ ಗಲ್ಲು ಶಿಕ್ಷೆ: ಬ್ರಿಟಿಷರ ಕಾಲದ ಕಾನೂನು ರದ್ದು; ಲೋಕಸಭೆಯಲ್ಲಿ ಅಪರಾಧ ತಿದ್ದುಪಡಿ ಕಾಯ್ದೆ ಮಂಡನೆ
ದೇಶದಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಬ್ರಿಟಿಷರ ಕಾಲದ ಕಾನೂನುಗಳಾದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲೋಕಸಭೆಯಲ್ಲಿ ಮಸೂದೆಗಳನ್ನು ಮಂಡಿಸಿದ್ದಾರೆ.