ರಾಜ್ಯಬ್ಲ್ಯಾಕ್ ಫಂಗಸ್ ಕುರಿತು ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ: ಡಾ. ಕೆ.ಸುಧಾಕರ್
ಬ್ಲ್ಯಾಕ್ ಫಂಗಸ್ ಕುರಿತು ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.