ಕ್ರಿಕೆಟ್ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್: 421 ರನ್ ಗೆ ಭಾರತ ಡಿಕ್ಲೇರ್, 271 ರನ್ ಮುನ್ನಡೆ
ಡೊಮಿನಿಕಾದಲ್ಲಿ ಶುಕ್ರವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ನ ಮೂರನೇ ದಿನದಾಟದ ಅಂತ್ಯಕ್ಕೆ ಭಾರತ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಭಾರತ ತಂಡ ಒಟ್ಟಾರೆ 271 ರನ್ಗಳ ಮುನ್ನಡೆ ಸಾಧಿಸಿದೆ.