ಭಾರತ ಲಾಕ್ ಡೌನ್

ಲಾಕ್‌ಡೌನ್ ನಂತರ 6 ತಿಂಗಳವರೆಗೆ ಸಾರ್ವಜನಿಕ ಸಾರಿಗೆ ಬಳಕೆ ಕಡಿಮೆಯಾಗಲಿದೆ: ಸಮೀಕ್ಷೆ ವರದಿ
ಲಾಕ್‌ಡೌನ್ ನಂತರ ಆರು ತಿಂಗಳ ಕಾಲ ಸಾರ್ವಜನಿಕ ಸಾರಿಗೆಯ ಬಳಕೆಯ ಪ್ರಮಾಣದಲ್ಲಿ ಕುಸಿತ ಕಂಡುಬರಲಿದೆ. ಏಕೆಂದರೆ ಸಾರ್ವಜನಿಕರಿಗೆ ಗ 'ಆರೋಗ್ಯ ಸುರಕ್ಷತೆ' ಜನರಿಗೆ ಮೊದಲ ಆದ್ಯತೆಯಾಗಿರುತ್ತದೆ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರ(ಸೆಂಟರ್ ಫಾರ್ ಸೈನ್ಸ್ ಆಂಡ್ ಎನ್ವಿರಾನ್ಮೆಂಟ್) ಇತ್ತೀಚಿನ ವಿಶ್ಲೇಷಣೆ ಹೇಳಿದೆ.

ಗ್ರಾಮೀಣ ಭಾರತಕ್ಕೂ ಅಂಟಿದ ಕೊರೋನಾ ಸೋಂಕು?, ನಿಯಂತ್ರಣ ಕಳೆದುಕೊಂಡಿತೇ ಭಾರತ?
ದೇಶಾದ್ಯಂತ ತನ್ನ ಕದಂಬ ಬಾಹುಗಳನ್ನು ಚಾಚುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕು ಇದೀಗ ಗ್ರಾಮೀಣ ಭಾರತವನ್ನೂ ಆಕ್ರಮಿಸಿತೇ ಎಂಬ ಆತಂಕ ಇದೀಗ ವ್ಯಕ್ತವಾಗುತ್ತಿದೆ.

10.9 ರಿಂದ 12.2ಕ್ಕೆ; ಕೊರೋನಾ ವೈರಸ್ ದ್ವಿಗುಣ ಪ್ರಮಾಣ ಮತ್ತಷ್ಟು ಇಳಿಕೆ!
ಮಾರಕ ಕೊರೋನಾ ವೈರಸ್ ಪ್ರಸರಣ ಪ್ರಮಾಣ ಭಾರತದಲ್ಲಿ ಮತ್ತಷ್ಟು ನಿಧಾನಗತಿಯಾಗಿದ್ದು, ದೇಶದಲ್ಲಿ ವೈರಸ್ ಸೋಂಕಿತರ ದ್ವಿಗುಣ ಪ್ರಮಾಣ ಮತ್ತಷ್ಟು ಕುಸಿತವಾಗಿದೆ.

ಕೊರೋನಾ ವೈರಸ್: ಭಾರತದಲ್ಲಿ 24 ಗಂಟೆಗಳಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆ
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್: ಭಾರತದಲ್ಲಿದ್ದ 60 ಸಾವಿರ ವಿದೇಶಿಗರು ತವರಿಗೆ ರವಾನೆ: ವಿದೇಶಾಂಗ ಇಲಾಖೆ
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ಭಾರತದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದ ಸುಮಾರು 60 ಸಾವಿರ ವಿದೇಶಿಗರನ್ನು ಅವರ ತವರು ರಾಷ್ಟ್ರಗಳಿಗೆ ರವಾನೆ ಮಾಡಲಾಗಿದೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ವೈರಸ್: ಗರಿಷ್ಠ ಸಾವು ಕಂಡ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಅಗ್ರ ಸ್ಥಾನ, ಕರ್ನಾಟಕಕ್ಕೆ?
ಮಾರಕ ಕೊರೋನಾ ವೈರಸ್ ನಿಂದಾಗಿ ಅತೀ ಹೆಚ್ಚು ಸಾವು ಕಂಡ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ.

ಕೋವಿಡ್-19: 24 ಗಂಟೆಗಳಲ್ಲಿ 1,383 ಹೊಸ ಪಾಸಿಟಿವ್ ಪ್ರಕರಣ, ಭಾರತದಲ್ಲಿ 20 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 645 ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಾದ್ಯಂತ 1,383 ಹೊಸ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ 20 ಸಾವಿರ ಗಡಿ ದಾಟಿದೆ.

ಓಲಾ, ಊಬರ್ ಮಾದರಿಯಂತೆ ರೈತರ ನೆರವಿಗೆ ಈಗ ಕಿಸಾನ್ ರಥ
ಲಾಕ್ ಡೌನ್ ಹಿನ್ನಲೆಯಲ್ಲಿ ತಾವು ಬೆಳೆದ ಬೆಳೆಯನ್ನು ಸಾಗಾಟ ಮಾಡಲಾಗದ ಕಷ್ಟ ಪಡುತ್ತಿರುವ ರೈತರ ಪಾಲಿಗೆ ಇದೀಗ ಸಿಹಿಸುದ್ದಿಯೊಂದು ಬಂದಿದ್ದು, ಓಲಾ-ಊಬರ್ ಮತ್ತು ಪೋರ್ಟರ್ ಮಾದರಿಯಲ್ಲೇ ರೈತರ ಬೆಳೆಗಳನ್ನು ಸಾಗಿಸುವ ಸಲುವಾಗಿ ಕಿಸಾನ್ ರಥ ಕಾರ್ಯ ನಿರ್ವಹಿಸಲಿದೆ.

ಕೊರೋನಾ ವೈರಸ್: 24 ಗಂಟೆಗಳಲ್ಲಿ 35 ಸಾವು, 308ಕ್ಕೇರಿದ ಸಾವಿನ ಸಂಖ್ಯೆ, 9,152 ಪಾಸಿಟಿವ್ ಪ್ರಕರಣ ದಾಖಲು!
ಕಳೆದ 24 ಗಂಟೆಗಳಲ್ಲಿ ಮಾರಕ ಕೊರೋನಾ ವೈರಸ್ ಗೆ ದೇಶದಲ್ಲಿ ಮತ್ತೆ 35 ಸಾವು ಸಂಭವಿಸಿದ್ದು, ಆ ಮೂಲಕ ದೇಶದಲ್ಲಿ ಕೋವಿಡ್-19ಗೆ ಸಾವನ್ನಪ್ಪಿದವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ.

