ಭಾರತದ ಆರ್ಥಿಕತೆ

India’s 'dead economy': ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿದ ಯುಕೆ ಪಿಎಂ! ಉಲ್ಲೇಖಿಸಿದ್ದು ಏನು?
ಇದೇ ಮೊದಲ ಬಾರಿಗೆ ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್ಮರ್, ಭಾರತದ ಆರ್ಥಿಕ ಬೆಳವಣಿಗೆ ಗಮನಾರ್ಹವಾಗಿದೆ. ದೇಶವು ಇತ್ತೀಚೆಗೆ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ.

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ; 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಭಾರತೀಯ ಸರಕುಗಳ ಮೇಲೆ ಶೇಕಡಾ 25ರಷ್ಟು ಸುಂಕವನ್ನು ಘೋಷಿಸಿದ್ದರು.

'ಭಾರತದ ಆರ್ಥಿಕತೆ ಸತ್ತಿದೆ' ಎಂಬುದು ಪ್ರಧಾನಿ, ಹಣಕಾಸು ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಗೊತ್ತು: ರಾಹುಲ್ ಗಾಂಧಿ
ಡೊನಾಲ್ಡ್ ಟ್ರಂಪ್ ಒಂದು ಸತ್ಯವನ್ನು ಹೇಳಿರುವುದು ನನಗೆ ಸಂತೋಷ ತಂದಿದೆ. ಬಿಲಿಯನೇರ್ ಗೌತಮ್ ಅದಾನಿಗೆ ಸಹಾಯ ಮಾಡಲು ಬಿಜೆಪಿ ಭಾರತದ ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ಗಾಂಧಿ ಆರೋಪಿಸಿದರು.

2025-26 ರಲ್ಲಿ ಭಾರತ ಶೇ.6.4ರಷ್ಟು ಬೆಳವಣಿಗೆ ಸಾಧಿಸಲಿದೆ: IMF
IMF ನಿನ್ನೆ ತನ್ನ ವಿಶ್ವ ಆರ್ಥಿಕ ದೃಷ್ಟಿಕೋನ (WEO) ನವೀಕರಣವನ್ನು ಬಿಡುಗಡೆ ಮಾಡಿತು. ಭಾರತದಲ್ಲಿ ಬೆಳವಣಿಗೆಯು 2025- 2026 ರಲ್ಲಿ ಶೇಕಡಾ 6.4 ರಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ.

ಜಾಗತಿಕ ಪ್ರಕ್ಷುಬ್ಧತೆ ನಡುವೆಯೂ ಭಾರತದ ಆರ್ಥಿಕತೆ ಬಲಿಷ್ಠ: RBI ಗವರ್ನರ್ ಶಕ್ತಿಕಾಂತ್ ದಾಸ್
ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು, ಸ್ಥಿರ ಹಣಕಾಸು ವ್ಯವಸ್ಥೆ ಮತ್ತು ಚೇತರಿಸಿಕೊಳ್ಳುವ ಬಾಹ್ಯ ವಲಯಗಳ ಕಾರಣದಿಂದಾಗಿ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಆರ್ ಬಿಐ ಗವರ್ನರ್ ಹೇಳಿದ್ದಾರೆ.

ಮೋದಿ ಸರ್ಕಾರದ ತಪ್ಪು ನಿರ್ವಹಣೆಯ ಪರಿಣಾಮ ಆರ್ಥಿಕತೆ 20 ವರ್ಷ ಹಿಂದಕ್ಕೆ: ಕಾಂಗ್ರೆಸ್
ಮೋದಿ ಸರ್ಕಾರದ ತಪ್ಪು ನಿರ್ವಹಣೆಯಿಂದಾಗಿ ಆರ್ಥಿಕತೆ 20 ವರ್ಷ ಹಿಂದಕ್ಕೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

2023-24ರಲ್ಲಿ ಭಾರತದ ಆರ್ಥಿಕತೆ ಬೆಳವಣಿಗೆ ಶೇ.7.3: ಕೇಂದ್ರ ಸರ್ಕಾರ ಅಂದಾಜು
2023-24ರಲ್ಲಿ ಭಾರತದ ಆರ್ಥಿಕತೆಯು ಶೇ. 7.3 ರಷ್ಟು ಪ್ರಗತಿಯಾಗಲಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (ಎನ್ ಎಸ್ ಒ) ಶುಕ್ರವಾರ ಊಹಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತೆ ಶೇ. 7.2 ರಷ್ಟಿತ್ತು.

ಅಂದಾಜಿಗಿಂತ 2 ವರ್ಷ ಮೊದಲೇ, 2027ರ ವೇಳೆಗೆ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: SBI ಸಂಶೋಧನೆ
ಈ ಹಿಂದಿನ ಅಂದಾಜಿಗಿಂತ 2 ವರ್ಷ ಮೊದಲೇ ಅಂದರೇ 2027ರ ವೇಳೆಗೆ ಭಾರತವು ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಸಂಶೋಧನಾ ವರದಿಯಲ್ಲಿ ತಿಳಿಸಿದೆ.

ವಿಶ್ವದ ಅಗ್ರ ಮೂರು ಆರ್ಥಿಕ ದೇಶಗಳಲ್ಲಿ ಭಾರತಕ್ಕೆ ಸ್ಥಾನ ಸದ್ಯದಲ್ಲೆ; 70 ಸಾವಿರ ಮಂದಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಶನಿವಾರ 70 ಸಾವಿರ ನೇಮಕಾತಿ ಪತ್ರಗಳನ್ನು ಹೊಸದಾಗಿ ಸೇರ್ಪಡೆಗೊಂಡವರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದರು. ನಂತರ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದರು.

