ದೇಶಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗು
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಾಗಿ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಮೇಲಿನ ಕಾನೂನು ಖಾತರಿ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪುನರುಚ್ಚರಿಸಿದ್ದಾರೆ.