ದೇಶಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಇಂದು ಎಫ್ಐಆರ್ ದಾಖಲಿಸುತ್ತೇವೆ: ಸುಪ್ರೀಂ ಕೋರ್ಟ್ ಗೆ ದೆಹಲಿ ಪೊಲೀಸರು!
ಭಾರತೀಯ ರೆಸ್ಲಿಂಗ್ ಫೆಡರೇಶನ್(ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳ ಆರೋಪದ ಸಂಬಂಧ ಇಂದು ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದರು.