ದೇಶ72ನೇ ಸೇನಾ ದಿನಾಚರಣೆ: ಹುತಾತ್ಮ ಯೋಧರಿಗೆ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರಿಂದ ಗೌರವ ನಮನ
ದೇಶಾದ್ಯಂತ ಬುಧವಾರ 72ನೇ ಸೇನಾ ದಿನವನ್ನು ಆಚರಿಸಲಾಗುತ್ತಿದೆ. ಜನರಲ್.ಕೆ.ಎಂ.ಕಾರ್ಯಪ್ಪ ಅವರು 1949ರಲ್ಲಿ ಸೇನಾ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡು ಸ್ವಾತಂತ್ರ್ಯೋತ್ತರದಲ್ಲಿ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡ ದಿನದ ಸ್ಮರಣೆಗಾಗಿ ಭಾರತೀಯ ಸೇನಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.