ಭಾರತ್ ಜೋಡೋ ನ್ಯಾಯ್ ಯಾತ್ರೆ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಖಿಲೇಶ್ ಯಾದವ್ ಭಾಗಿ
ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದರು.

ಹಿಮಂತಾ ಬಿಸ್ವಾ ಶರ್ಮಾ, ಮಿಲಿಂದ್ ದಿಯೋರಾ ರಂತಹ ನಾಯಕರು ಕಾಂಗ್ರೆಸ್ ಬಿಟ್ಟು ಹೋಗಲಿ: ರಾಹುಲ್ ಗಾಂಧಿ
ಹಿಮಂತ ಮತ್ತು ಮಿಲಿಂದ್‌ರಂತಹವರು ಕಾಂಗ್ರೆಸ್ ತೊರೆಯುವುದನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಅವರಂತಹ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಿಲ್ಲ.. ಪಕ್ಷ ಬಿಟ್ಟು ಹೋಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯಾಯ್ ಯಾತ್ರೆಗೆ ಎರಡು ದಿನ ಬ್ರೇಕ್: ದೆಹಲಿಗೆ ತೆರಳಿದ ರಾಹುಲ್ ಗಾಂಧಿ
'ಭಾರತ್ ಜೋಡೋ ನ್ಯಾಯ್ ಯಾತ್ರೆ' ಪಶ್ಚಿಮ ಬಂಗಾಳ ಪ್ರವೇಶಿಸಿದ ನಂತರ ಎರಡು ದಿನಗಳ ವಿರಾಮ ತೆಗೆದುಕೊಂಡಿದ್ದರಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ನವದೆಹಲಿಗೆ ತೆರಳಿದರು.

'ಭಾರತ್ ಜೋಡೋ ನ್ಯಾಯ ಯಾತ್ರೆ': ಹೆದರುವುದಿಲ್ಲ, ಮತ್ತಷ್ಟು ಎಫ್ಐಆರ್ ದಾಖಲಿಸಿ; ಅಸ್ಸಾಂ ಪೊಲೀಸರಿಗೆ ರಾಹುಲ್ ಗಾಂಧಿ ಸವಾಲು
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನಲ್ಲಿದ್ದು, ಈ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಬೆಳವಣಿಗೆಯನ್ನು ರಾಹುಲ್ ಗಾಂಧಿ ಖಂಡಿಸಿದ್ದಾರೆ.

'ನಾವು ಬ್ಯಾರಿಕೇಡ್ ಮುರಿದಿದ್ದೇವೆ, ಆದರೆ ಕಾನೂನು ಮುರಿಯುವುದಿಲ್ಲ; ಅಸ್ಸಾಂನಲ್ಲಿ ಸರ್ಕಾರ ರಚಿಸುತ್ತೇವೆ': ರಾಹುಲ್ ಗಾಂಧಿ
ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಹಿಡಿಯಲಾಗಿದ್ದು, ಇದನ್ನು ಖಂಡಿಸಿ ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಖಂಡಿಸಿದ ಕಾಂಗ್ರೆಸ್
ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲೆ ಬಿಜೆಪಿ ಗೂಂಡಾಗಳು ನಡೆಸಿದ ದಾಳಿಯನ್ನು ಖಂಡಿಸುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ ಮತ್ತು ರಾಜ್ಯದಲ್ಲಿ ಆಡಳಿತ ಪಕ್ಷ, ಭಾರತ ಸಂವಿಧಾನ ಜನರಿಗೆ ನೀಡಿರುವ...

ಅಸ್ಸಾಂ: ಭಾರತ ಜೋಡೊ ನ್ಯಾಯ ಯಾತ್ರೆ ಮುಂದುವರೆಸಿದ ರಾಹುಲ್ ಗಾಂಧಿ, ಜನರೊಂದಿಗೆ ಸಂವಾದ
ಈಶಾನ್ಯ ಭಾರತದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರಂಭಿಸಿರುವ ಭಾರತ ಜೋಡೊ ನ್ಯಾಯ ಯಾತ್ರೆ ಮುಂದುವರೆದಿದ್ದು, ಅಸ್ಸಾಂನ ಲಖೀಂಪುರದ ಭೋಗಿನದಿಯಿಂದ ಯಾತ್ರೆ ಪುನಾರಂಭಗೊಂಡಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ: ಮಣಿಪುರದಲ್ಲಿ ರಾಹುಲ್ ಜೊತೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ವಿಶೇಷ ವಿಮಾನದ ಮೂಲಕ ಮಣಿಪುರಕ್ಕೆ ತೆರಳಿದ್ದಾರೆಂದು ತಿಳಿದುಬಂದಿದೆ.

ರಾಹುಲ್ ಗಾಂಧಿ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಗೆ ಮಣಿಪುರ ಸರ್ಕಾರದಿಂದ ಅನುಮತಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಮಣಿಪುರ ಸರ್ಕಾರ ಬುಧವಾರ ಅನುಮತಿ ನೀಡಿದೆ. ಆದರೆ ಯಾತ್ರೆಯಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸಿದೆ.

