ಕ್ರೀಡೆಟೋಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭವೀನಾ ಪಟೇಲ್ ಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ: ತವರಿನಲ್ಲಿ ಸಂಭ್ರಮಾಚರಣೆ
ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಗುಜರಾತ್ ಮೂಲದ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರಿಗೆ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.