ಭಿನ್ನಮತ

ಜಾತಿಗಣತಿ ಸಮೀಕ್ಷೆ 2025: ಸಚಿವರಲ್ಲಿಯೇ ಭಿನ್ನಮತ ಸ್ಫೋಟ, ಸಿಎಂ ಸಮ್ಮುಖದಲ್ಲೇ ನಾಯಕರ ಆಕ್ಷೇಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖವೇ ಕೆಲ ಸಚಿವರು ಸಮೀಕ್ಷೆ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿದ್ದಲ್ಲದೆ ಸಮೀಕ್ಷೆಯನ್ನೇ ನಡೆಸದಂತೆ ಆಗ್ರಹಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಹೈಕಮಾಂಡ್ ದ್ವಂದ್ವ ನೀತಿ: ಸಿಡಿದೇಳಲು ಸಿದ್ಧರಾದ Vijayendra? (ಸುದ್ದಿ ವಿಶ್ಲೇಷಣೆ)
ಬಿ.ವೈ.ವಿಜಯೇಂದ್ರ ವಿರುದ್ಧ ಹಿರಿಯ ಮುಖಂಡ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರಂಭಿಸಿರುವ ಬಂಡಾಯ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಹಿನ್ನಲೆಯಲ್ಲೇ ಎದ್ದಿರುವ ಮತ್ತೊಂದು ಪ್ರಶ್ನೆ ಎಂದರೆ ಇದು ರಾಜ್ಯದಲ್ಲಿ ಪಕ್ಷ ಇಬ್ಭಾಗಕ್ಕೆ ಮುನ್ನುಡಿಯಾಗಲಿದೆಯೆ? ಎಂಬುದು.

ಚನ್ನಪಟ್ಟಣ ವಿಧಾನಸಭೆ ಉಚುನಾವಣೆ: ಅಭ್ಯರ್ಥಿ ಆಯ್ಕೆ ಸಂಬಂಧ ದೋಸ್ತಿಗಳ ಭಿನ್ನಮತ ಬಯಲು; ಬಿಜೆಪಿ-ಜೆಡಿಎಸ್ ನಾಯಕರ ಮಾತುಕತೆ ವಿಫಲ!
ಯೋಗೇಶ್ವರ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿಲ್ಲ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಅಥವಾ ಬಿಎಸ್ಪಿ ಟಿಕೆಟ್‌ನಲ್ಲಿ ಇಲ್ಲವೇ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಗೈರು: ಎಂಟನೇ ಅದ್ಬುತ ಎಂದ ಮುನಿರತ್ನ!
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿನ್ನೆ ಬೆಳಗಾವಿಗೆ ಭೇಟಿ ನೀಡಿದಾಗ ಅವರನ್ನು ಸ್ವಾಗತಿಸಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು ಹೋಗದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಹೈದರಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿದ್ದರಾಮಯ್ಯ- ಹರಿಪ್ರಸಾದ್ ನಡುವಿನ ಭಿನ್ನಮತ ಶಮನ ಸಾಧ್ಯತೆ!
ಪುನರ್ ರಚನೆಗೊಂಡ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಮೊದಲ ಸಭೆ ಇಂದು (ಶನಿವಾರ) ನಡೆಯಲಿದೆ. ಐದು ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸಂಪುಟ ವಿಸ್ತರಣೆ ನಂತರ ಭುಗಿಲೆದ್ದ ಅಸಮಾಧಾನದ ಬೇಗುದಿ: ಒಳಗೊಳಗೆ ಕುದಿಯುತ್ತಿರುವ ಶಾಸಕರು!
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನೆಲ್ಲೇ ಅಸಮಾಧಾನದ ಕಟ್ಟೆಯೊಡೆದಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯದ ಹೊಗೆ ಹೊತ್ತಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯಲ್ಲಿ 'ಬಂಡಾಯ'ದ ಬಿರುಗಾಳಿ: ಶೀಘ್ರವೇ ಭಿನ್ನಮತ ಶಮನ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಅತೃಪ್ತರಾಗಿರುವ ನಾಯಕರನ್ನು ಮನವೊಲಿಸುವ ಪ್ರಯತ್ನದಲ್ಲಿ ಬಿಜೆಪಿಯ ಹಿರಿಯ ನಾಯಕರು ತೊಡಗಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಗುರುವಾಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗೋವಾ ಬಿಜೆಪಿ ಶಾಸಕರಲ್ಲಿ ಭಿನ್ನಮತದ ವರದಿ: ಸಿ.ಟಿ. ರವಿ ಹೇಳಿದಿಷ್ಟು
ಗೋವಾ ಸಂಪುಟ ಹಾಗೂ ಸರ್ಕಾರದಲ್ಲಿ ಯಾವುದೇ ಸ್ಥಾನ ನೀಡದಿರುವುದರಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 8 ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಪಕ್ಷದ ಉಸ್ತುವಾರಿ ಸಿ. ಟಿ. ರವಿ ಅಲ್ಲಗಳೆದಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ
ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಗದ್ದರ್ (ದೇಶದ್ರೋಹಿ) ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕರೆದ ನಂತರ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಭಿನ್ನಮತ ತಲೆದೋರಿರುವಂತೆಯೇ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ನವೆಂಬರ್ 29 ರಂದು ರಾಜಸ್ಥಾನಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ.

