ರಾಜ್ಯಭೂ ಸುಧಾರಣೆ ತಿದ್ದುಪಡಿ ಕಾಯಿದೆಗೆ 10 ದಿನಗಳಲ್ಲಿ ಸುಗ್ರೀವಾಜ್ಞೆ: ಸರ್ಕಾರದ ನಡೆ ಸಮರ್ಥಿಸಿಕೊಂಡ ಆರ್.ಅಶೋಕ್
ವಿವಾದಿತ ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿದ್ದರೆ ಕಂದಾಯ ಸಚಿವ ಆರ್. ಅಶೋಕ್ ಸರ್ಕಾರದ ನಡೆಯನ್ನು ಸಮರ್ಥಿಸಿ ಕೊಂಡಿದ್ದಾರೆ. 10 ದಿನಗಳಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಿದ್ದುಪಡಿ ತಂದು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.