ದೇಶಭೂಪಟ ವಿವಾದ: ನೇಪಾಳದ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತ
ದೇಶದ ರಾಜಕೀಯ ಭೂಪಟವನ್ನು ಬದಲಾಯಿಸುವ ಲಿಪುಲೇಖ್, ಕಾಲಪಾಣಿ ಮತ್ತು ಲಿಂಪಿಯಾಧುರ ಪ್ರದೇಶಗಳು ತನಗೆ ಸೇರಿದ್ದು ಎಂದು ತೋರಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಬಗ್ಗೆ ನೇಪಾಳ ಸಂಸತ್ತಿನಲ್ಲಿ ನಡೆಯುತ್ತಿರುವ ಚರ್ಚೆ, ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ.