ಮಂಕಿ ಪಾಕ್ಸ್

ಝೀಕಾ ಬೆನ್ನಲ್ಲೇ ಈಗ Mpox ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸನ್ನದ್ಧ ಎಂದ ಸಚಿವ
ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು.

ದೆಹಲಿಯಲ್ಲಿ 31 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್: ಟ್ರಾವೆಲ್ ಹಿಸ್ಟರಿ ಇಲ್ಲದಿದ್ರೂ ಸೋಂಕು ಪತ್ತೆ, ಭಾರತದಲ್ಲಿ ನಾಲ್ಕನೇ ಪ್ರಕರಣ!
ಕೇರಳ ನಂತರ ದೆಹಲಿಯಲ್ಲಿ ಮಂಕಿ ಪಾಕ್ಸ್ ಪತ್ತೆಯಾಗಿದೆ. ರಾಷ್ಟ್ರರಾಜಧಾನಿಗೂ ಮಂಕಿ ಪಾಕ್ಸ್ ಸೋಂಕು ಹರಡಿದ್ದು, ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆಯಾಗುತ್ತಿದ್ದಂತೆ ಆತಂಕ ಹೆಚ್ಚಾಗಿದೆ.ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ದೇ ಇದ್ರೂ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣ 4ಕ್ಕೇರಿದೆ.

