ಮಂಡ್ಯ ಕ್ಷೇತ್ರ

ಶಾಸಕ ಸ್ಥಾನಕ್ಕೆ ಎಚ್ ಡಿ ಕುಮಾರಸ್ವಾಮಿ ರಾಜಿನಾಮೆ
ಇತ್ತೀಚೆಗೆ ಸಂಸದರಾಗಿ ಆಯ್ಕೆಯಾಗಿ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್, ಮಂಜುನಾಥ್ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ 'ಸ್ಟಾರ್ ಚಂದ್ರು', ಪತ್ನಿಯ ಆಸ್ತಿ ಮೌಲ್ಯ 633 ಕೋಟಿ ರೂ.!
ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.

ಮಂಡ್ಯ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ, ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿಕೆ ಶಿವಕುಮಾರ್
ಮಂಡ್ಯದ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ: ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಂಬರೀಶ್
ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮನವೊಲಿಕೆ ಕಾರ್ಯ ನಡೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸುಮಲತಾ, ಮಂಡ್ಯದಿಂದ ಬಿಜೆಪಿ ಟಿಕೆಟ್ ಗೆ ಒತ್ತಾಯ?
ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಬಗ್ಗೆ ಒತ್ತಡ ಹಾಕಿರುವ ಊಹಾಪೋಹಗಳು ಹರಿದಾಡುತ್ತಿವೆ.

ಸುಮಲತಾ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯತೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ, ಮಾರ್ಚ್ 20ರಂದು ನಾಮಪತ್ರ ಸಲ್ಲಿಕೆ: ಸುಮಲತಾ
ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆ: ಸುಮಲತಾಗೆ ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು- ಚಲುವರಾಯಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಮಂಡ್ಯದಿಂದ ಸ್ಪರ್ಧಿಸಲು ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

