ರಾಜ್ಯಸುಚನಾ ಸೇಠ್ 6 ದಿನ ಪೊಲೀಸ್ ಕಸ್ಟಡಿಗೆ: ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯ, ಇಂದು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ
ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.