ಮಣಿಪುರ ಪರಿಸ್ಥಿತಿ

ಕೇಂದ್ರದಲ್ಲಿ ಸಚಿವ ಸ್ಥಾನದ ಆಫರ್ ವದಂತಿ ನಡುವೆ ಮೋದಿ ವಿರುದ್ಧ ಶರದ್ ಪವಾರ್ ತೀವ್ರ ವಾಗ್ದಾಳಿ!
ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಇತ್ತೀಚಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಜೊತೆಗಿನ ಭೇಟಿಯು ರಾಜಕೀಯ ವಲಯಗಳಲ್ಲಿ ಗೊಂದಲ ಮೂಡಿಸಿರುವಂತೆಯೇ ಅವರು ವಿರೋಧ ಪಕ್ಷದ ಮೈತ್ರಿ ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿದರೆ ಕೇಂದ್ರ ಸಚಿವ ಸ್ಥಾನವನ್ನು ನೀಡಲಾಗುವುದು ಎಂಬ ಆಫರ್ ತಿರಸ್ಕರಿಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷಗಳ ಪಟ್ಟು; ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಮಣಿಪುರ ಪರಿಸ್ಥಿತಿ ಬಗ್ಗೆ ಪ್ರಧಾನಿ ಹೇಳಿಕೆ ನೀಡಬೇಕು, ಪ್ರತಿಪಕ್ಷಗಳ ಬೇಡಿಕೆ ಸರಿ: ಮಾಜಿ ರಾಜ್ಯಪಾಲ ಮಲಿಕ್
ಮಣಿಪುರದ ಪರಿಸ್ಥಿತಿ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂಬ ಪ್ರತಿಪಕ್ಷಗಳ ಸಂಸದರ ಬೇಡಿಕೆ "ಸರಿಯಾಗಿದೆ" ಎಂದ ಜಮ್ಮು ಮತ್ತು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು, ಮಣಿಪುರ...

ಲೋಕಸಭೆ: ಮಣಿಪುರ ಪರಿಸ್ಥಿತಿ ಕುರಿತು ವಿಪಕ್ಷಗಳಿಂದ ತೀವ್ರ ಗದ್ದಲ, ಕೋಲಾಹಲ; ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಬುಡಕಟ್ಟು ಮಹಿಳೆಯರ ಅರೆಬೆತ್ತಲೆ ಮೆರವಣಿಗೆಯ ವಿಡಿಯೋ ವೈರಲ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಇಂದು ಕೂಡಾ ಗದ್ದಲ, ಕೋಲಾಹಲ ಮುಂದುವರೆಸಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಮಣಿಪುರ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕು: ಕಾಂಗ್ರೆಸ್ ಒತ್ತಾಯ
ಮಣಿಪುರ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಪ್ರಧಾನಿ ಮೋದಿಯೊಂದಿಗೆ ಸೋನಿಯಾ ಗಾಂಧಿ ಮಾತುಕತೆ: ಸಂಸತ್ತಿನಲ್ಲಿ ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಒತ್ತಾಯ
ಮಣಿಪುರದ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ಚರ್ಚಿಸುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಒತ್ತಾಯಿಸಿದ್ದಾರೆ ಎಂದು ಲೋಕಸಭೆಯಲ್ಲಿನ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ಇಂದು ಮಣಿಪುರ ಪರಿಸ್ಥಿತಿ ಕುರಿತು ಸರ್ವಪಕ್ಷ ಸಭೆ
ಮಣಿಪುರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ.

