ರಾಜ್ಯಮತದಾರರ ದತ್ತಾಂಶ ತಿರುಚಿದ ಪ್ರಕರಣ: ತಡೆಯಾಜ್ಞೆ ತಂದ ಅಧಿಕಾರಿಗಳು; ತನಿಖೆಗೆ ಹಿನ್ನಡೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಮಾಹಿತಿಗಳು,ದತ್ತಾಂಶಗಳನ್ನು ತಿರುಚಿದ ಪ್ರಕರಣದಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣದ ತನಿಖೆಗೆ ಹಿನ್ನಡೆಯುಂಟಾಗಿದೆ. ನೋಟಿಸ್ ಪಡೆದ ಕೆಲವು ಆರೋಪಿ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ.