ರಾಜ್ಯಬಿಜೆಪಿಯವರು ಪ್ರಚೋದನೆ ಮಾಡುವುದರಲ್ಲಿ ನಿಸ್ಸೀಮರು, ಮದ್ದೂರು ಘಟನೆ ಬಗ್ಗೆ ವರದಿ ಬಂದ ಮೇಲೆ ಕ್ರಮ: ಸಿದ್ದರಾಮಯ್ಯ
ಬೆಂಗಳೂರಿನಲ್ಲಿಂದು ಮದ್ದೂರು ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮದ್ದೂರಿಗೆ ಹೋಗುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿ ಅವರು ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.