ರಾಜ್ಯಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯ ವಶಕ್ಕೆ, FIR ದಾಖಲು..!
ಅಬಕಾರಿ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ ಸುಮಾರು 12.25ಕ್ಕೆ ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.