ರಾಜ್ಯಮನೆ ಖರೀದಿದಾರರ ಸಮಸ್ಯೆಗಳು: 15 ದಿನಗಳೊಳಗೆ ವರದಿ ಕೇಳಿದ ಕಂದಾಯ ಇಲಾಖೆ
ಮುದ್ರಾಂಕ ಮತ್ತು ನೋಂದಣಿ ಇಲಾಖೆಗೆ ತಾವು ಹಲವು ತಿಂಗಳ ಹಿಂದೆಯೇ ದೂರು ನೀಡಿದ್ದರೂ ಈವರೆಗೆ ಕ್ರಮ ಕೈಗೊಂಡಿಲ್ಲ, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಲಿಖಿತ ದೂರಿನ ಮೇರೆಗೆ ಕಂದಾಯ ಇಲಾಖೆಯು ಹದಿನೈದು ದಿನದೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಿಗೆ ಪತ್ರ ಬರೆದಿದೆ.