ರಾಜ್ಯರಂಜಾನ್ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ
ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ನಮಾಜ್ ಮಾಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಚಿಸುವ ನಿಯಮವನ್ನು ಆದೇಶವನ್ನು ಮುಸ್ಲಿಂಮ್ ಸಮುದಾಯದ ಬಾಂಧವರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮುಹಮ್ಮದ್ ಯೂಸೂಫ್ ಕರೆ ನೀಡಿದ್ದಾರೆ.